ಆ ಬಂಡೆಯನ್ನು ನಂಬಿ ನಾನು ಕೆಟ್ಟಿದ್ದೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

Prasthutha|

ಮೈಸೂರು: ಸಿದ್ದರಾಮಯ್ಯನವರ ಪರ ಬಂಡೆ ಥರ ಇದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಆದರೆ ಆ ಬಂಡೆಯನ್ನು ನಂಬಿ ನಾನು ಕೆಟ್ಟಿದ್ದೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

- Advertisement -


ಮೈಸೂರಿನಲ್ಲಿ ನಡೆದ ಪಾದಯಾತ್ರೆ ಸಮಾವೇಶದಲ್ಲಿ ಮಾತನಾಡಿ, ಇನ್ನು ನನ್ನ ನೇತೃತ್ವದಲ್ಲಿ 136 ಸ್ಥಾನ ಗೆದ್ದಿದ್ದೇವೆ. ಸಿದ್ದರಾಮಯ್ಯಗೆ ಕಲ್ಲುಬಂಡೆಯಾಗಿ ನಿಂತಿದ್ದೇನೆ ಎಂದು ಡಿಕೆಶಿ ಹೇಳಿದ್ದಾರೆ. ಈ ಹಿಂದೆ ನನಗೂ ಇದೇ ರೀತಿ ಡಿಕೆಶಿ ಹೇಳಿದ್ದರು. ಲೋಕಸಭೆಯಲ್ಲಿ ಕಾಂಗ್ರೆಸ್ನವರು 9ನೇ ಸ್ಥಾನವನ್ನು ಹೇಗೆ ಗೆದ್ದಿದ್ದಾರೆ ಗೊತ್ತಿದೆ. ಅದಕ್ಕೆ ನಾನು 8 ಸ್ಥಾನ ಎಂದು ಹೇಳುತ್ತೇನೆ. ನನ್ನ ಕಂಡರೆ ಹೊಟ್ಟೆಉರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಒಳ್ಳೆಯ ಆಡಳಿತ ನೀಡಿದರೆ ನಮಗೆ ಯಾಕೆ ಹೊಟ್ಟೆಉರಿ. ನನ್ನ ಮೇಲೆ ಒಂದು ಕಪ್ಪುಚುಕ್ಕೆ ಇಲ್ಲ ಎಂದು ಸಿಎಂ ಹೇಳಿದ್ದಾರೆ. ಸಿದ್ದರಾಮಯ್ಯ ಹಿಂದುಳಿದ ವರ್ಗದ ಮುಖ್ಯಮಂತ್ರಿ ಅಲ್ಲ, ಆರೂವರೆ ಕೋಟಿ ಜನರ ಮುಖ್ಯಮಂತ್ರಿ ಎಂದರು.

ಖಾಕಿ ಚಡ್ಡಿ ಹಾಕಿದ್ದಾರೆಂದು ಎಂದು ನನ್ನ ಬಗ್ಗೆ ಹೇಳಿದ್ದಾರೆ. ಆದ್ರೆ, ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು ಮಾಡಿಕೊಂಡಿದ್ದಾರೆ. ಕಾನೂನು ಬಾಹಿರವಾಗಿ ಸೈಟ್ ಪಡೆದ ಬಗ್ಗೆ ಪ್ರಶ್ನೆ ಮಾಡ್ತಿದ್ದೇವೆ. ಅರಿಶಿಣ ಕುಂಕುಮ ರೀತಿ ಭೂಮಿ ದಾನ ಮಾಡಿದ್ದು ತಪ್ಪಾ ಎಂದಿದ್ದಾರೆ. ಆದ್ರೆ, ಕಾನೂನು ಬದ್ಧವಾಗಿ ಭೂಮಿ ಕೊಟ್ಟಿದ್ದರೆ ಪ್ರಶ್ನೆ ಮಾಡ್ತಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕೊಟ್ಟಿರುವುದು ಸರ್ಕಾರದ ಭೂಮಿ ಎಂದರು.



Join Whatsapp