ಬೆಂಗಳೂರು: ಹೆಬ್ಬಾಳ ಫ್ಲೈಓವರ್​ ಮೇಲೆ ಸರಣಿ ಅಪಘಾತ

Prasthutha|

►ಬಿಎಂಟಿಸಿ ಚಾಲಕನ ಯಡವಟ್ಟಿಗೆ ಬೈಕ್, ಕಾರು ಜಖಂ

- Advertisement -

ಬೆಂಗಳೂರು: ಹೆಬ್ಬಾಳದ ಎಸ್.ಟಿ ಮಾಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಏರ್ಪೋರ್ಟ್ ನಿಂದ ಎಚ್ಎಸ್ಆರ್ ಲೇಔಟ್ ಕಡೆ ಸಂಚಾರ ಮಾಡ್ತಿದ್ದ ಬಿಎಂಟಿಸಿ ವೋಲ್ವೋ ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು ಬೈಕ್ ಹಾಗೂ ಕಾರುಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸರಣಿ ಅಪಘಾತಗಳು ಸಂಭವಿಸಿದ್ದು ಒಬ್ಬ ವಾಹನ ಸವಾರನ ಕಾಲಿಗೆ ತೀವ್ರವಾಗಿ ಗಾಯವಾಗಿದೆ.

- Advertisement -

ಅಪಘಾತ ದೃಶ್ಯ ಬಸ್​ನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಿನ್ನೆ ಬೆಳಗ್ಗೆ 9.25 ಗಂಟೆ ಸುಮಾರಿಗೆ ಹೆಬ್ಬಾಳ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.



Join Whatsapp