ಅಯೋಧ್ಯೆ: ರಾಮಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳ ಕಳವು

Prasthutha|

ಅಯೋಧ್ಯೆ: ಅಯೋಧ್ಯೆಯ ರಾಮಪಥ ಹಾಗೂ ಭಕ್ತಿಪಥದಲ್ಲಿದ್ದ 50 ಲಕ್ಷ ರೂ. ಮೌಲ್ಯದ ಬೀದಿ ದೀಪಗಳನ್ನು ಕಳವು ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

- Advertisement -

3,800ಕ್ಕೂ ಅಧಿಕ ಬೀದಿ ದೀಪಗಳು ಹಾಗೂ 36 ಪ್ರೊಜೆಕ್ಟರ್​ ದೀಪಗಳನ್ನು ಕಳವು ಮಾಡಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.

ಅಯೋಧ್ಯೆಯಲ್ಲಿ ಹೆಚ್ಚಿನ ಭದ್ರತಾ ಪ್ರದೇಶದಲ್ಲಿರುವ ಭಕ್ತಿ ಪಥ ಮತ್ತು ರಾಮ ಪಥ ಮೇಲೆ ದೀಪಗಳನ್ನು ಅಳವಡಿಸಲಾಗಿತ್ತು ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಆಗಸ್ಟ್ 9 ರಂದು ದೂರು ದಾಖಲಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ನೀಡಿದ ಗುತ್ತಿಗೆಯಡಿಯಲ್ಲಿ ದೀಪಗಳನ್ನು ಸ್ಥಾಪಿಸಿದ ಯಶ್ ಎಂಟರ್‌ಪ್ರೈಸಸ್ ಮತ್ತು ಕೃಷ್ಣ ಆಟೋಮೊಬೈಲ್ಸ್ ಸಂಸ್ಥೆಯ ಪ್ರತಿನಿಧಿಯಿಂದ ದೂರು ದಾಖಲಾಗಿದೆ.

- Advertisement -

ರಾಮಪಥದಲ್ಲಿ 6,400 ಬಿದಿರಿನ ದೀಪಗಳು ಮತ್ತು ಭಕ್ತಿ ಪಥದಲ್ಲಿ 96 ಪ್ರೊಜೆಕ್ಟರ್ ದೀಪಗಳನ್ನು ಅಳವಡಿಸಲಾಗಿದೆ. ಮಾರ್ಚ್ 19 ರವರೆಗೆ ಎಲ್ಲಾ ದೀಪಗಳು ಇದ್ದವು ಆದರೆ ಮೇ 9 ರಂದು ಪರಿಶೀಲನೆಯ ನಂತರ ಕೆಲವು ದೀಪಗಳು ಕಾಣೆಯಾಗಿರುವುದು ಕಂಡುಬಂದಿದೆ. ಇದುವರೆಗೆ ಸುಮಾರು 3,800 ದೀಪಗಳು ಬಿದಿರಿನ ದೀಪಗಳು ಮತ್ತು 36 ಪ್ರೊಜೆಕ್ಟರ್ ದೀಪಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎಂದು ಶೇಖರ್ ಶರ್ಮಾ ದೂರಿನಲ್ಲಿ ತಿಳಿಸಿದ್ದಾರೆ.



Join Whatsapp