ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇ ಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು.
ಜನ ಔಷಧಿ ಯೋಜನೆ ಕೇಂದ್ರ ಸರ್ಕಾರದ್ದು. ಇದರಿಂದ ಅತಿ ಕಡಿಮೆ ದರದಲ್ಲಿ ಔಷಧಿಗಳು ದೊರೆಯುತ್ತವೆ. ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರಿಗೆ ಲಾಬಿಗಳು ತಲೆ ಸವರಿದೆ. ಆದ್ದರಿಂದ ಇಂತಹ ಕೆಲಸ ಮಾಡಲು ಹೊರಟಿದ್ದಾರೆ. ಇವರಿಗೆ ಕಮಿಶನ್ ಸಿಗಲಿದೆ ಎಂಬ ಕಾರಣಕ್ಕೆ ಜನರಿಗೆ ದ್ರೋಹ ಬಗೆಯಲು ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.