ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ SIT ಅಧಿಕಾರಿಗಳು ನಿರ್ಧರಿಸಲಿದ್ದಾರೆ : ಗೃಹ ಸಚಿವ ಬಸವರಾಜ ಬೊಮ್ಮಾಯಿ

Prasthutha|

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ SIT ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೊಡಲಾಗಿದೆ. SIT ಅಧಿಕಾರಿಗಳು ಕಾನೂನಿನಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ. SIT ತನಿಖೆಯಲ್ಲಿ ನಾನು ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡುವುದಿಲ್ಲ. ರಮೇಶ್ ಜಾರಕಿಹೊಳಿ ಬಂಧನದ ಬಗ್ಗೆ SIT ಅಧಿಕಾರಿಗಳು ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

ಸಂತ್ರಸ್ತ ಯುವತಿಯನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿರುವ SIT ಅಧಿಕಾರಿಗಳು, ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದ್ದಾರೆ. ಮತ್ತೊಂದೆಡೆ SIT ಪೊಲೀಸರು ಸಂತ್ರಸ್ತ ಯುವತಿಯ ವೀಡಿಯೋ ರಿಲೀಸ್ ಮಾಡಿರುವ ಕುರಿತು ಸಂತ್ರಸ್ತೆ ಪರ ವಕೀಲ ಜಗದೀಶ್ ಫೇಸ್ ಬುಕ್ ವೀಡಿಯೋದಲ್ಲಿ ಕಿಡಿಕಾರಿದ್ದಾರೆ.

“SIT ಪೊಲೀಸರು ಕಾನೂನು ಬದ್ಧವಾಗಿ ತನಿಖೆ ನಡೆಸುತ್ತಿದ್ದಾರೆ. SIT ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ಕೂಡ ನೀಡಲಾಗಿದೆ. ಅವರ ಕೆಲಸದಲ್ಲಿ ತಾನು ಮಧ್ಯಪ್ರವೇಶಿಸುವುದಿಲ್ಲ. ಕಾಂಗ್ರೆಸ್ ಮೇಟಿ ಪ್ರಕರಣದಲ್ಲಿ ಹೇಗೆ ನಡೆದುಕೊಂಡಿದೆ ಎಂಬುದು ಗೊತ್ತಿದೆ. ಸಿಐಡಿ ತನಿಖೆ ನಡೆಸಿ ಎಫ್‌ಐಆರ್ ಕೂಡ ದಾಖಲಿಸದೇ ಕ್ಲೀನ್ ಚಿಟ್ ಕೊಟ್ಟಿತ್ತು. ಇಂತಹ ಕಾಂಗ್ರೆಸ್ ಗೆ ಈ ಪ್ರಕರಣದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಇಲ್ಲ” ಎಂದು ಬೊಮ್ಮಾಯಿ ಕಿಡಿಕಾರಿದ್ದಾರೆ.



Join Whatsapp