ಕರಾವಳಿ ಸೇರಿ ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ

Prasthutha|

ಮಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಚುರುಕು ಪಡೆಯುತ್ತಿದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಎರಡು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದೆ.


ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ತುಮಕೂರು, ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.



Join Whatsapp