ಜಮ್ಮು ಕಾಶ್ಮೀರದಲ್ಲಿ ನಮ್ಮದೇ ಬಹುಮತ ಬರಲಿದೆ: ಫಾರೂಕ್ ಅಬ್ದುಲ್ಲಾ

Prasthutha|

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.

- Advertisement -


ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯನ್ನು ಘೋಷಿಸಲು ಚುನಾವಣಾ ಆಯೋಗದ ನಿರ್ಧಾರ ಸ್ವಾಗತಾರ್ಹ, ನಾನು ಚುನಾವಣೆಗೆ ಸ್ಪರ್ಧಿಸುತ್ತೇನೆ. ನಾವೇ ಬಹುಮತ ಪಡೆಯುತ್ತೇವೆ ಎಂದು ಅಬ್ದುಲ್ಲಾ ವಿಶ್ವಾಸ ವ್ಯಕ್ತಪಡಿಸಿದರು. ಸಂಭಾವ್ಯ ಚುನಾವಣಾ ಪೂರ್ವ ಮೈತ್ರಿಗೆ ಸಂಬಂಧಿಸಿದಂತೆ, ಚರ್ಚೆಗಳನ್ನು ನಡೆಸಲಾಗುವುದು ಎಂದು ಅಬ್ದುಲ್ಲಾ ಹೇಳಿದರು.


ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷವು ಸಂಪೂರ್ಣ ಬಹುಮತವನ್ನು ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಪ್ರದೇಶವು ಐದು ವರ್ಷಗಳಿಂದ ಚುನಾಯಿತ ಶಾಸಕಾಂಗವನ್ನು ಹೊಂದಿಲ್ಲ. ಇಂಡಿಯಾ ಟುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಬ್ದುಲ್ಲಾ ಅವರು ಈ ಘೋಷಣೆ ಮಾಡಿದ್ದಾರೆ.



Join Whatsapp