ತುಮಕೂರು | ಪ್ಯಾಲೆಸ್ತೀನ್ ಬಾವುಟ ಪ್ರದರ್ಶನ: ಐವರ ಬಂಧನ

Prasthutha|

ತುಮಕೂರು: ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಜಿಕೆಬಿಎಂಎಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸ್ಥಳಕ್ಕೆ ಬಂದ ಯುವಕರ ಗುಂಪೊಂದು ಪ್ಯಾಲೆಸ್ತೀನ್ ಬಾವುಟ ಪ್ರದರ್ಶನಕ್ಕೆ ಯತ್ನ ನಡೆಸಿದೆ.

- Advertisement -


ಘಟನೆಗೆ ಸಂಬಂಧಿಸಿದಂತೆ ಐವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.


ಕುಣಿಗಲ್ ಪಟ್ಟಣದ ಷರೀಫ್ ಮೊಹಲ್ಲಾ ನಿವಾಸಿಗಳಾದ ಜಾವೀದ್ ಪಾಷಾ ಅಲಿಯಾಸ್ ಚೋಟು (23), ನ್ಯಾಮತ್ ಉಲ್ಲಾ (28) ಮತ್ತು ಫುರ್ಕಾನ್ (18) ಬಂಧಿತರು.

- Advertisement -


ಈ ಮೂವರ ಹೊರತಾಗಿ ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.


ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಯುವಕರ ಆರೋಗ್ಯ ತಪಾಸಣೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.



Join Whatsapp