ಮಹಾರಾಷ್ಟ್ರ: ಮಹಾರಾಷ್ಟ್ರದಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿದೆ.
ಸದ್ಯಕ್ಕೆ ಶಿವಸೇನೆ (ಯುಬಿಟಿ), ಎನ್‌ಸಿಪಿ (ಶರದ್ ಪವಾರ್) ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಯುತ್ತಿದೆ. ಇದೆಲ್ಲದರ ನಡುವೆ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಶುಕ್ರವಾರ ಉದ್ಧವ್ ಠಾಕ್ರೆ ದೊಡ್ಡ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ಎನ್‌ಸಿಪಿ ಯಾರನ್ನು ಸಿಎಂ ಅಭ್ಯರ್ಥಿಯನ್ನಾಗಿ ಮಾಡಿದರೂ ಅವರ ಪಕ್ಷ ಅವರನ್ನು ಬೇಷರತ್ತಾಗಿ ಬೆಂಬಲಿಸುತ್ತದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಜೊತೆಗೆ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯು ರಾಜ್ಯದ ಸ್ವಾಭಿಮಾನವನ್ನು ರಕ್ಷಿಸುವ ಹೋರಾಟವಾಗಿದೆ ಎಂದು ಮಹಾ ವಿಕಾಸ್ ಅಘಾಡಿ ಸಭೆಯಲ್ಲಿ ಠಾಕ್ರೆ ಒತ್ತಿ ಹೇಳಿದರು