ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ನಿಧನ

Prasthutha|

- Advertisement -

ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಪಕ ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು(67) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರೀನ್‌ ಕಾರಣದಿಂದ ಕಾಲುನೋವಿನ ಸಮಸ್ಯೆ ಎದುರಿಸುತ್ತಿದ್ದ ಪ್ರೊ.ಮಹೇಶ್‌ ಚಂದ್ರ ಗುರು ಅವರಿಗೆ ಇಂದು ಸಂಜೆ 7.30 ರ ಸುಮಾರಿಗೆ ಹೃದಯಘಾತ ಸಂಭವಿಸಿ, ನಿಧನರಾಗಿರುವುದಾಗಿ ತಿಳಿದುಬಂದಿದೆ.

- Advertisement -

ನಿವೃತ್ತಿಯ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ .ಮಹೇಶ್‌ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು. ನಾಡ ಹಬ್ಬ ದಸರಾ ವೇಳೆ ಮಹಿಷಾ ದಸರಾ ಆಚರಣೆಗೊಳ್ಳಲು ಇವರು ಪ್ರಮುಖ ಪಾತ್ರ ವಹಿಸಿದ್ದರು.



Join Whatsapp