ಊಟದ ವೇಳೆ ಇಲಿ ಪಾಷಾಣ ಸಿಂಪಡಿಕೆ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Prasthutha|

ಬೆಂಗಳೂರು: ಹಾಸ್ಟೆಲ್ ಊಟ ಸೇವಿಸಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸ್ಟ್ರೇ ಮಾಡುತ್ತಿದ್ದರು. ಇಲಿ ಪಾಷಾಣದ ವಾಸನೆಯಿಂದ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

- Advertisement -

ಇಲಿ ಪಾಷಾಣದ ಪರಿಣಾಮದಿಂದ ವಿದ್ಯಾಥಿಗಳು ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ವಿದ್ಯಾರ್ಥಿಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಖಾಸಗಿ ನರ್ಸಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ.

ನರ್ಸಿಂಗ್ ಹಾಸ್ಟೆಲ್ ಕಟ್ಟಡದ ನೆಲ ಮಹಡಿಯಲ್ಲಿ ಊಟದ ಹಾಲ್ ಇದೆ. ವಿದ್ಯಾರ್ಥಿಗಳು ಊಟ ಮಾಡಲು ಹಾಲ್ ಗೆ ಬಂದ ವೇಳೆಯೇ ಇಲಿ ಪಾಷಾಣ ಸಿಂಪಡಣೆ ಮಾಡಲಾಗುತ್ತಿತ್ತು. ಈ ವೇಳೆ ಏನು ತೊಂದರೆ ಆಗುವುದಿಲ್ಲ ಎಂದು ಊಟ ಮುಗಿಸಿ ವಿದ್ಯಾರ್ಥಿಗಳು ತೆರಳಿದ್ದರು. ಆದರೆ ಸ್ವಲ್ಪ ಹೊತ್ತಿನಲ್ಲೇ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp