ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ

Prasthutha|

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ಸದಾಶಿವನಗರ ಪೊಲೀಸ್ ಠಾಣೆ ಬಳಿ ನಡೆದಿದೆ.

- Advertisement -


ಚಾಲಕನ ವಿವರ ಲಭ್ಯವಾಗಿಲ್ಲ. ಚಾಲಕನಿಗೆ ಅಲ್ಪಸ್ವಲ್ಪ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಕೂಡಲೇ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.



Join Whatsapp