ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ: ಡಿಕೆ ಶಿವಕುಮಾರ್

Prasthutha|

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದು ತನಿಖೆಗೆ ಹೆದರುವ ರಕ್ತವಲ್ಲ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.

- Advertisement -


‘ಸಿದ್ದರಾಮಯ್ಯ ತಪ್ಪಿತಸ್ಥರಲ್ಲದಿದ್ದರೆ ತನಿಖೆಗೆ ಹೆದರುವುದು ಏಕೆ’ ಎಂದು ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮುಖ್ಯಮಂತ್ರಿಗಳು ಹೆದರುವ ಪ್ರಶ್ನೆಯೇ ಇಲ್ಲ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ ಎಂದರು.


ಸಿದ್ದರಾಮಯ್ಯ ಅವರು ತನಿಖೆಗೆ ಹೆದರುತ್ತಿದ್ದರೆ ಐಎಎಸ್ ಅಧಿಕಾರಿಯಿಂದ ತನಿಖೆಗೆ ಮತ್ತು ನ್ಯಾಯಾಂಗ ತನಿಖೆಗೆ ಆದೇಶ ನೀಡುತ್ತಿರಲಿಲ್ಲ. ಮುಡಾ ಅಕ್ರಮಗಳ ಬಗ್ಗೆ ಸಿದ್ದರಾಮಯ್ಯ ವಿರುದ್ಧ ಯಾವುದೇ ಪುರಾವೆ ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ಪ್ರಾಸಿಕ್ಯೂಷನ್ ಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ” ಎಂದರು.



Join Whatsapp