ಪ್ರಾಸಿಕ್ಯೂಷನ್’ಗೆ ಅನುಮತಿ: ರಾಜ್ಯಪಾಲರಿಗೆ Z ಕೆಟಗರಿ ಸೆಕ್ಯೂರಿಟಿ, ಬುಲೆಟ್ ಪ್ರೂಫ್ ಕಾರು..!

Prasthutha|

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬುಲೆಟ್ ಪ್ರೂಫ್ ಕಾರು ತರಿಸಿಕೊಂಡಿದ್ದಾರೆ. ಆಗಸ್ಟ್ 29ರವರೆಗೆ ಎಲ್ಲ ಸಾರ್ವಜನಿಕ ಕಾರ್ಯಕ್ರಮ ಮುಂದೂಡಿದ್ದಾರೆ.

- Advertisement -


ಮುಖ್ಯಮಂತ್ರಿ ಸಿದ್ದಾರಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ Z ಕೆಟಗರಿ ಸೆಕ್ಯೂರಿಟಿ ನೀಡಿದೆ. ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರು ತರಿಸಿಕೊಂಡಿದ್ದಾರೆ.


ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಷ್ಟು ದಿನಗಳ ಕಾಲ ಇನೋವಾ ಕಾರಿನಲ್ಲಿ ಓಡಾಡುತ್ತಿದ್ದರು. ಆದರೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ನಂತರ ರಾಜ್ಯಪಾಲರಿಗೆ ಕೆಲ ಕಾಂಗ್ರೆಸ್ ನಾಯಕರು ಎಚ್ಚರಿಕೆ ನೀಡಿದರು. ಇದರ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬಿಗಿ ಭದ್ರತೆ ಒದಗಿಸಿದೆ.



Join Whatsapp