ಮೈಸೂರು ದಸರಾ: ಗಜ‍ಪಯಣಕ್ಕೆ ಚಾಲನೆ

Prasthutha|

ಹುಣಸೂರು: ನಾಗರಹೊಳೆ ಹೆಬ್ಬಾಗಿಲು ವೀರನಹೊಸಹಳ್ಳಿ ಗೇಟ್ ಬಳಿಯಲ್ಲಿ ಬುಧವಾರ (ಆ.21) ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಈಶ್ವರ್ ಖಂಡ್ರೆ ಸಾಂಸ್ಕೃತಿಕ ಕಲರವಗಳ ನಡುವೆ ಗಜ ಪಯಣಕ್ಕೆ ಚಾಲನೆ ನೀಡಿದರು.

- Advertisement -


ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುತ್ತಿರುವ ಅಭಿಮನ್ಯು ಸೇರಿ 9 ಆನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ, ಬೆಳಿಗ್ಗೆ 10.40ಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಪುಷ್ಪಾರ್ಚನೆ ಮಾಡಿ ಗಜ ಪಯಣಕ್ಕೆ ಚಾಲನೆ ನೀಡಿದರು.


ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು, ಭೀಮ, ಏಕಲವ್ಯ , ರಾಂಪುರ ಆನೆ ಶಿಬಿರದ ರೋಹಿತ್, ದೊಡ್ಡಹರವೆ ಆನೆ ಶಿಬಿರದ ಲಕ್ಷ್ಮಿ, ವರಲಕ್ಷ್ಮಿ, ಕೊಡಗು ಜಿಲ್ಲೆಯ ದುಬಾರೆ ಶಿಬಿರದ ‘ಧನಂಜಯ’, ‘ಗೋಪಿ’, ‘ಕಂಜನ್’ ಆನೆಗಳನ್ನು ಬಣ್ಣ ಮತ್ತು ಹೂಗಳಿಂದ ಅಲಂಕರಿಸಲಾಗಿತ್ತು.

- Advertisement -


ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಇದಕ್ಕಾಗಿ ವಿಮಾ ಕಂಪನಿಗೆ ಪ್ರೀಮಿಯಂ ಹಣವನ್ನು ಪಾವತಿಸಲಾಗಿದೆ.


ಆಗಸ್ಟ್ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ಈ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆಯನ್ನು ಅರಣ್ಯ ಇಲಾಖೆ ಮಾಡಿಸಿದೆ.



Join Whatsapp