ತಮಿಳುನಾಡು ಚುನಾವಣೆಗೆ ನಟ ದಳಪತಿ ವಿಜಯ್ ಸಿದ್ಧತೆ: ಪಕ್ಷದ ಚಿಹ್ನೆ ಬಿಡುಗಡೆ

Prasthutha|

ಚೆನ್ನೈ: ನಟ ದಳಪತಿ ವಿಜಯ್ ರಾಜಕೀಯ ಪಯಣ ಆರಂಭಗೊಂಡಿದೆ. ಇಂದು ಪಕ್ಷದ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ.

- Advertisement -

ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷವನ್ನು ಫೆಬ್ರವರಿಯಲ್ಲಿ ಪ್ರಾರಂಭಿಸಿದ್ದರು. ಇದೀಗ ದಳಪತಿ ವಿಜಯ್ ಗುರುವಾರ ತಮ್ಮ ರಾಜಕೀಯ ಪಕ್ಷದ ಬಾವುಟ ಹಾಗೂ ಚಿಹ್ನೆಯನ್ನು ಬಿಡುಗಡೆ ಮಾಡಿದ್ದಾರೆ.


ಈ ವರ್ಷದ ಫೆಬ್ರವರಿಯಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಘೋಷಿಸಿದ್ದರು. ಇದರೊಂದಿಗೆ 2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ವಿಜಯ್ ಹೇಳಿದ್ದರು. ಈ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಯಾವುದೇ ಮೈತ್ರಿ ಅಥವಾ ಪಕ್ಷವನ್ನು ಬೆಂಬಲಿಸಲಿಲ್ಲ.



Join Whatsapp