KSRTC ಬಸ್ ಟಿಕೆಟ್ ದರ ಹೆಚ್ಚಳ ಸುಳಿವು ನೀಡಿದ ಸಚಿವ ರಾಮಲಿಂಗಾ ರೆಡ್ಡಿ

Prasthutha|

ಬೆಂಗಳೂರು: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸುಳಿವು ನೀಡಿದ್ದಾರೆ.

- Advertisement -


ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (ಕೆಇಆರ್ ಸಿ) ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ (ಕೆಟಿಆರ್ಸಿ) ರಚನೆಗೆ ಸರ್ಕಾರ ಮುಂದಾಗಿದೆ ಎಂಬ ಪತ್ರಿಕಾ ವರದಿಯೊಂದನ್ನು ಉಲ್ಲೇಖಿಸಿ ಪ್ರತಿಪಕ್ಷ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ಇದಕ್ಕೆ ತಿರುಗೇಟು ನೀಡಿರುವ ಸಾರಿಗೆ ಸಚಿವರು, ಹಿಂದಿನ ಬಿಜೆಪಿ ಸರ್ಕಾರ ಸಂಸ್ಥೆಯನ್ನು ನಷ್ಟದಲ್ಲಿಟ್ಟು ಹೋಗಿದೆ. ಪರಿಣಾಮವಾಗಿ ದರ ಏರಿಕೆ ಅನಿವಾರ್ಯವಾಗಿದೆ ಎಂದಿದ್ದಾರೆ. ಆ ಮೂಲಕ ಟಿಕೆಟ್ ದರ ಏರಿಕೆಯ ಸುಳಿವು ನೀಡಿದ್ದಾರೆ.

- Advertisement -

 ‘ಅಶೋಕ್ ರವರೇ, ನೀವು ಸಾರಿಗೆ ಸಚಿವರಾಗಿದ್ದವರು, ಸಾರಿಗೆ ಸಂಸ್ಥೆಗಳ‌ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದಾರಾ ಎಂದರೆ ಆಶ್ಚರ್ಯವಾಗುತ್ತಿದೆ. 2013 ರಲ್ಲಿ ತಾವು ಸಾರಿಗೆ ಸಚಿವರಾಗಿದ್ದಾಗ ಬಸ್ ಪ್ರಯಾಣ ದರ 10.5% ಏರಿಕೆ ಮಾಡಿರುವುದು ಮರೆತುಬಿಟ್ಟಿದ್ದೀರಾ ? 2020 ರಲ್ಲಿ ತಮ್ಮದೇ ಪಕ್ಷ ಅಧಿಕಾರದಲ್ಲಿದ್ದಾಗ ಬಸ್ ಪ್ರಯಾಣ ದರ 12% ಹೆಚ್ಚಳ ಮಾಡಿದಾಗ ನೀವು ಕ್ಯಾಬಿನೆಟ್ ಮಂತ್ರಿಯಾಗಿದ್ದರಲ್ಲವೇ ? ಆಗ ಯಾಕೆ ವಿರೋಧ ವ್ಯಕ್ತ ಪಡಿಸಲಿಲ್ಲ
ಎಂದು ತಿರುಗೇಟು ನೀಡಿದರು.



Join Whatsapp