ದರ್ಶನ್ ಫೋಟೋ ವೈರಲ್ ಬೆನ್ನಲ್ಲೇ ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್

Prasthutha|

ಬೆಂಗಳೂರು: ನಟ ದರ್ಶನ್ ಅವರು ಜೈಲಿನಲ್ಲಿ ಕುಳಿತು ಸಿಗರೇಟ್ ಸೇದುತ್ತಾ, ಕಾಫಿ ಕುಡಿಯುತ್ತಾ ಇದ್ದರು. ಈ ಫೋಟೋ ವೈರಲ್ ಆಗಿತ್ತು. ಇದರ ಜೊತೆಗೆ ದರ್ಶನ್ ಅವರು ವಿಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಈ ಹಿನ್ನೆಲೆ ಜೈಲಿನ ಏಳು ಅಧಿಕಾರಿಗಳನ್ನು ಗೃಹ ಸಚಿವ ಪರಮೇಶ್ವರ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

- Advertisement -

ಜೈಲರ್ ​​​ಗಳಾದ ಶರಣಬಸವ ಅಮೀನ್ ​​ಗಢ, ಖಂಡೇವಾಲ್, ಸಹಾಯಕ ಜೈಲರ್ ​ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್​ ತಲವಾರ್​, ಜೈಲಿನ ಹೆಡ್​​ ವಾರ್ಡರ್​ಗಳಾದ ವೆಂಕಪ್ಪ, ಸಂಪತ್, ವಾರ್ಡರ್​​​ ಬಸಪ್ಪ ಅವರನ್ನು ಅಮಾನತುಗೊಂಡವರು.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಏಳು ಅಧಿಕಾರಿಗಳನ್ನು ನಾವು ಸಸ್ಪೆಂಡ್ ಮಾಡಿದ್ದೇವೆ. ನಾನು ವರದಿಯನ್ನು ಕೇಳಿದ್ದೇವೆ. ಈ ರೀತಿಯ ಘಟನೆ ನಡೆಯಬಾರದು. ಕೆಲವರನ್ನು ಸಸ್ಪೆಂಡ್ ಮಾಡಿದ್ದು, ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಮೇಲಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡ್ತೇನೆ. ಪದೇ ಪದೇ ಈ ರೀತಿ ಆಗಬಾರದು. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಹಾಕಲಾಗುತ್ತಿದೆ. ಆದಾಗ್ಯೂ ಈ ರೀತಿಯ ಘಟನೆ ನಡೆಯುತ್ತಿದೆ’ ಎಂದು ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ.

- Advertisement -

 ‘ಫೋಟೋ ಯಾರು ತೆಗೆದರು? ಯಾರ ಮೊಬೈಲ್​ ನಲ್ಲಿ ತೆಗದಿದ್ದಾರೆ ಅನ್ನೋದು ಮುಖ್ಯ ಆಗುತ್ತದೆ’ ಎಂದು ಪರಮೇಶ್ವರ್ ಹೇಳಿದ್ದಾರೆ.



Join Whatsapp