ಸಚಿವ ಬೈರತಿ ಸುರೇಶ್ ಪುತ್ರನ ಜೊತೆ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್ ಮಗಳ ಅದ್ಧೂರಿ ನಿಶ್ಚಿತಾರ್ಥ

Prasthutha|

►ಊಟದಲ್ಲಿ ಜೊತೆಯಾದ ಡಿಕೆಶಿ, ಗೆಹ್ಲೋಟ್

- Advertisement -


ಬೆಂಗಳೂರು: ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಬುಧವಾರ ನಡೆದಿದೆ.


ಬೈರತಿ ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಇನ್ನು ಯಲಹಂಕ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬೈರತಿ ಸುರೇಶ್ ಅವರು ಬೀಗರಾಗುತ್ತಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ನಾಯಕರು ನಿಶ್ಚಿತಾರ್ಥದಲ್ಲಿ ಪಾಲ್ಗೊಂಡು ಹೊಸ ಜೋಡಿಗೆ ಶುಭ ಹಾರೈಸಿದರು.

- Advertisement -


ಇದೇ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜೊತೆಯಲ್ಲಿ ಕುಳಿತು ಊಟ ಸವಿದಿದ್ದಾರೆ.



Join Whatsapp