ಕುಂತೂರು ಶಾಲಾ ಕಟ್ಟಡ ಕುಸಿದು ವಿದ್ಯಾರ್ಥಿಗಳಿಗೆ ಗಾಯ: ಆಸ್ಪತ್ರೆಗೆ ಭೇಟಿ ನೀಡಿದ ಮಂಜುನಾಥ ಭಂಡಾರಿ

Prasthutha|

ಪುತ್ತೂರು: ಕುಂತೂರಿನ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ, ಛಾವಣಿ ಕುಸಿದು ಬಿದ್ದು ಗಾಯಗೊಂಡು ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರು ವಿದ್ಯಾರ್ಥಿಗಳನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಈ ವೇಳೆ ಪಾಲಕರು ಮತ್ತು ಮಕ್ಕಳಿಗೆ ಧೈರ್ಯ ತುಂಬಿದರು.

- Advertisement -


ಅಲ್ಲದೆ, ಪುತ್ತೂರಿನ ಸಹಾಯಕ ಕಮಿಷನರ್ ಜುಬಿನ್ ಮಹಾಪಾತ್ರ ರವರೊಂದಿಗೆ ಈ ಬಗ್ಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ಸಂದರ್ಭ ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ಮತ್ತಿತ್ತರು ಉಪಸ್ಥಿತರಿದ್ದರು.

- Advertisement -

ಕಡಬ ತಾಲ್ಲೂಕಿನ ಕುಂತೂರಿನ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ದುರಸ್ತಿ ಕಾರ್ಯ ಪ್ರಗತಿಯಲ್ಲಿರುವಾಗಲೇ ಗೋಡೆ ಹಾಗೂ ಚಾವಣಿ ಕುಸಿದು ನಾಲ್ವರು ವಿದ್ಯಾರ್ಥಿನಿಯರು ಮಂಗಳವಾರ ಗಾಯಗೊಂಡಿದ್ದರು. ಗೋಡೆ ಕುಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮೈದಾನದಲ್ಲಿ ಆಟೋಟ ಚಟುವಟಿಕೆಯಲ್ಲಿ ತೊಡಗಿದ್ದರು. ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳು ಮಾತ್ರ ಕೊಠಡಿಯೊಳಗಿದ್ದರು. ಹಾಗಾಗಿ ಹೆಚ್ಚಿನ ಅನಾಹುತ ಆಗುವುದು ತಪ್ಪಿದೆ.



Join Whatsapp