ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರತಿನಿಧಿ ಸಭೆಯು ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆಯವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.
ಪ್ರತೀ ಮೂರು ವರ್ಷಗಳಿಗೆ ನಡೆಯುವ ಆಂತರಿಕ ಚುನಾವಣೆಲ್ಲಿ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷರಾಗಿ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿಗಳಾಗಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಸಾಲಿ ಮದ್ದಡ್ಕ, ಸಮಿತಿ ಸದಸ್ಯರಾಗಿ ನವಾಝ್ ಕಟ್ಟೆ, ಹನೀಫ್ ಪುಂಜಾಲಕಟ್ಟೆ, ಸಹಲ್ ನಿರ್ಸಾಲ್ ಆಯ್ಕೆಯಾದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಸಮಿತಿಯ ಅಧ್ಯಕ್ಷ ನವಾಝ್ ಕಟ್ಟೆ ಪಕ್ಷದ ಕಾರ್ಯಾ ಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿ ಮಾತನಾಡಿ, ಎಲ್ಲಾ ಪ್ರತಿನಿಧಿಗಳು, ನಾಯಕರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಕ್ಷೇತ್ರ ಸಮಿತಿಯೊಂದಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು.
ಕ್ಷೇತ್ರ ಪ್ರತಿನಿಧಿ ಸಭೆಯನ್ನು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಪಾನ್ಸೋ ಪ್ರಾಂಕೊ ಧ್ವಜಾರೋಹಣ ನೆರವೇರಿಸಿ ಉದ್ಘಾಟನೆ ಮಾಡಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ ಮತ್ತು ಜೊತೆ ಕಾರ್ಯದರ್ಶಿಗಳಾದ ಫಝಲ್ ರಹಮಾನ್ ಕ್ಷೇತ್ರದ 2023-24ರ ಸಂಕ್ಷಿಪ್ತ ವರದಿಯನ್ನು ವಾಚಿಸಿದರು.
ಇಂದಿನ ಪ್ರತಿನಿಧಿ ಸಭೆಯಲ್ಲಿ ದ. ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಚುನಾವಣಾ ಅಧಿಕಾರಿಯಾಗಿ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆ ಮಜಲು, ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ ಆಗಮಿಸಿದ್ದರು.
ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್ ಸ್ವಾಗತಿಸಿ, ಕ್ಷೇತ್ರ ಸಮಿತಿ ನೂತನ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಧನ್ಯವಾದಗೈದು, ಅಶ್ಫಾಕ್ ಪುಂಜಾಲಕಟ್ಟೆ ಕಾರ್ಯಕ್ರಮ ನಿರೂಪಿಸಿದರು.