ಪ್ಯಾರಿಸ್ ಪ್ಯಾರಾಲಿಂಪಿಕ್ಸ್| ಭಾರತಕ್ಕೆ ಡಬಲ್ ಧಮಾಕ: ಚಿನ್ನ, ಕಂಚಿನ ಪದಕಕ್ಕೆ ಗುರಿಯಿಟ್ಟ ಶೂಟರ್ಸ್

Prasthutha|

ಪ್ಯಾರಿಸ್: ಪ್ರಸ್ತುತ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.

- Advertisement -


ಕ್ರೀಡಾಕೂಟ ಆರಂಭವಾದ 2ನೇ ದಿನವೇ ಭಾರತ ಒಂದೇ ಸ್ಪರ್ಧೆಯಲ್ಲಿ 2 ಪದಕಗಳನ್ನು ಗೆದ್ದು ಬೀಗಿದೆ.


ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ ಹೆಚ್1 ವಿಭಾಗದ ಫೈನಲ್ ನಲ್ಲಿ ಶೂಟರ್ ಅವನಿ ಲೆಖರಾ ಚಿನ್ನದ ಪದಕ ಗೆದ್ದು ಬೀಗಿದರೆ, ಮೋನಾ ಅಹರ್ವಾಲ್ ಕಂಚಿನ ಪದಕಕ್ಕೆ ಗುರಿಯಿಟ್ಟರು.

- Advertisement -


ಈ ಹಿಂದೆ ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದ ಅವನಿ ಇದೀಗ ಮತ್ತೊಂದು ಚಿನ್ನದ ಪದಕದೊಂದಿಗೆ ದಾಖಲೆ ಬರೆದಿದ್ದಾರೆ.


ಅವನಿ 249.7 ಅಂಕ ಗಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟರೆ, ಮೋನಾ ಅಗರ್ವಾಲ್ 228.7 ಅಂಕಗಳೊಂದಿಗೆ ಕಂಚಿನ ಪದಕಕ್ಕೆ ಕೊರಳೊಡ್ಡಿದರು.



Join Whatsapp