ಮಂಗಳೂರು ಮಹಾನಗರ ಪಾಲಿಕೆ ಸಭೆಯಲ್ಲಿ ಭಾರೀ ಗದ್ದಲ: ಮೈಕ್ ಎಸೆದು ಆಕ್ರೋಶ ವ್ಯಕ್ತಪಡಿಸಿದ ವಿರೋಧ ಪಕ್ಷದ ಸದಸ್ಯರು

Prasthutha|

ಮಂಗಳೂರು: ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಕೆಲ ದಿನಗಳ ಹಿಂದೆ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯ ವೇಳೆ ನಡೆದಿದ್ದ ಬಸ್ ಗೆ ಕಲ್ಲು ತೂರಿದ್ದ ಪ್ರಕರಣವು ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಯಿತು.

- Advertisement -


ಪ್ರತಿಪಕ್ಷದ ನಾಯಕರಿಗೆ ಮಾತನಾಡಲು ಮೇಯರ್ ಅವಕಾಶ ನೀಡಿಲ್ಲ ಎಂದು ಆರೋಪಿಸಿ ಪ್ರತಿಪಕ್ಷದ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆಗೆ ಕುಳಿತು ಮೇಯರ್ ವಿರುದ್ಧ ಧಿಕ್ಕಾರ ಕೂಗಿದರು.
ಕಲ್ಲು ತೂರಾಟ ಪ್ರಕರಣದಲ್ಲಿ ಭಾಗಿಯಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಾಮನಿರ್ದೇಶಿತ ಸದಸ್ಯರನ್ನು ಸಭೆಯಿಂದ ಹೊರಕ್ಕೆ ಕಳುಹಿಸಬೇಕು ಎಂದು ಬಿಜೆಪಿ ಸದಸ್ಯೆ ಶಕೀಲ ಕಾವ ಒತ್ತಾಯಿಸಿದರು.


ಈ ವೇಳೆ ಧರಣಿ ಕುಳಿತ ಪ್ರತಿಪಕ್ಷದ ಸದಸ್ಯರು ಮಾತನಾಡಲು ಸ್ಥಳದಲ್ಲೇ ಮೈಕ್ ತರಿಸಿಕೊಂಡರು. ಅದು ಆನ್ ಆಗದಿದ್ದಾಗ ಸದಸ್ಯರೊಬ್ಬರು ಮೈಕ್ ಅನ್ನು ನೆಲಕ್ಕೆ ಕುಟ್ಟಿದ್ದು ಮೈಕ್ ತುಂಡಾದಾಗ ಆಡಳಿತ ಪಕ್ಷದ ಸದಸ್ಯರು ಮತ್ತೆ ಗದ್ದಲ ಎಬ್ಬಿಸಿದರು. ‘ಕಾಂಗ್ರೆಸ್ ಸದಸ್ಯರು ಇಲ್ಲೂ ಗೂಂಡಾಗಿರಿ ಮಾಡುತ್ತಿದ್ದಾರೆ’ ಎಂದು ಶಕೀಲ ಕಾವ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಆರೋಪಿಸಿದರು.



Join Whatsapp