ಬೆಂಗಳೂರು: ಕರೋನಾ ಮಹಾಮಾರಿಯ 2ನೇ ಅಲೆ ಹಿನ್ನಲೆಯಲ್ಲಿ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಗೊಂದಲಗಳಿದ್ದು ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದ್ದು, 6ರಿಂದ 9ನೇ ತರಗತಿಗಳು ಎಪ್ರಿಲ್ 20ರ ವರೆಗೆ ಸ್ಥಗಿತ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಬಗ್ಗೆ ಅವರು ತಿಳಿಸಿದ್ದಾರೆ. ಪರೀಕ್ಷೆಯ ಮೌಲ್ಯಾಂಕನದ ಬಗ್ಗೆ ನಿರ್ಧಾರ ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ. ಪರೀಕ್ಷೆ ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಎಲ್ಲರ ಅಭಿಪ್ರಾಯವನ್ನು ಪಡೆದು ಅದನ್ನು ಗಣನೆಗೆ ತೆಗೆದು ಸೂಕ್ತ ಕ್ರಮ ಕೈಗೊಳ್ಳುವುದಕ್ಕಾಗಿ ಈ ಸಭೆಯನ್ನು ಕರೆಯಲಾಗಿತ್ತು ಎಂದು ಹೇಳಿದ್ದಾರೆ.