‘ಚಾರ್ಜ್ ಶೀಟ್ ಸಾರ್ವಜನಿಕ ಡಾಕ್ಯುಮೆಂಟ್’: ಪರಮೇಶ್ವರ್

Prasthutha|

ಬೆಂಗಳೂರು: ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿ ಹೊರಗೆ ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳವಾರ ಹೇಳಿದರು.

- Advertisement -


ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಅಂಶ ಬಹಿರಂಗವಾಗುತ್ತಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಬಳಿಕ ಅಪೋಸಿಟ್ ಲಾಯರ್ ಗು ಚಾರ್ಜ್ ಶೀಟ್ ನೀಡಲಾಗುತ್ತದೆ. ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನು ಅಲ್ಲ. ಅದನ್ನು ನಿಲ್ಲಿಸಲು ಯಾರಿಂದಲೂ ಆಗುವುದಿಲ್ಲ. ಸಹಜವಾಗಿ ಚಾರ್ಜ್ ಶೀಟ್ ನಲ್ಲಿ ಮಾಹಿತಿ ಹೊರಗೆ ಬರುತ್ತದೆ. ಕೋರ್ಟ್ ಏನು ತೀರ್ಮಾನ ಮಾಡುತ್ತದೆ ನೋಡೋಣ ಎಂದು ಹೇಳಿದರು.


ಸಾರ್ವಜನಿಕವಾಗಿ ಮಾತನಾಡುವುದನ್ನು ಕೋರ್ಟ್ ಪರಿಗಣಿಸುವುದಿಲ್ಲ. ಸಾಕ್ಷ್ಯ, ದಾಖಲೆಗಳ ಆಧಾರದ ಮೇಲೆ ಪ್ರಕರಣ ನಡೆಯುತ್ತದೆ. ಪೊಲೀಸರು ಚಾರ್ಜ್ಶೀಟ್ ಸಲ್ಲಿಸಿ, ಸಾಕ್ಷ್ಯಾಧಾರಗಳನ್ನು ಕೋರ್ಟ್ಗೆ ನೀಡುತ್ತಾರೆ. ಆ ಆಧಾರದ ಮೇಲೆ ಪ್ರಕರಣದ ವಿಚಾರಣೆ ನಡೆಯುತ್ತದೆ ಎಂದು ಹೇಳಿದರು.



Join Whatsapp