ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಅವರಿಗೆ ಅಭಿಮಾನಿಗಳು, ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಹಾಗೂ ಅವರ ಪಕ್ಷದ ನಾಯಕರು ಅದ್ದೂರಿ ಸ್ವಾಗತ ನೀಡಿದರು.
ಈ ವೇಳೆ ಅವರಿಗೆ ಸುರಿಯುವ ಮಳೆಯಲ್ಲೂ ಹೂಮಳೆ ಸುರಿಸಿ, ಪಟಾಕಿ ಸಿಡಿಸಿ ಭವ್ಯ ಸ್ವಾಗತ ನೀಡಲಾಗಿದೆ. ಸಂಜಯ್ ಸಿಂಗ್ ಅವರಂತಹ ಹಿರಿಯ ನಾಯಕರು ಸೇರಿದಂತೆ ಅಪಾರ ಸಂಖ್ಯೆಯ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ಕೇಜ್ರಿವಾಲ್ ಅವರನ್ನು ಬರಮಾಡಿಕೊಂಡರು.