ಕಲಬುರಗಿ: ಗುಂಡಿಕ್ಕಿ ಮಾಜಿ ಗ್ರಾಮ ಪಂಚಾಯತ್‌ ಸದಸ್ಯನ ಹತ್ಯೆ

Prasthutha|

ಕಲಬುರಗಿ: ಆಳಂದ ತಾಲೂಕಿನ ಪಡಸಾವಳಿ ಗ್ರಾಮ ಪಂಚಾಯತ್‌ ಮಾಜಿ ಸದಸ್ಯ ವಿಶ್ವನಾಥ ಕಲ್ಯಾಣಿ ಜಮಾದರ್‌ (53) ಅವರನ್ನು ದುಷ್ಕರ್ಮಿಗಳು ಶುಕ್ರವಾರ ಗುಂಡಿಕ್ಕಿ ಕೊಂದಿದ್ದಾರೆ.

- Advertisement -

ಪಡಸಾವಳಿ ಗ್ರಾಮದವರಾದ ವಿಶ್ವನಾಥ ಗ್ರಾಮದಿಂದ ಆಳಂದ ತಾಲೂಕು ಕೇಂದ್ರಕ್ಕೆ ತೆರಳುತ್ತಿದ್ದ ವೇಳೆ ಖಾನಾಪುರ ಸಮೀಪದ ಮುಖ್ಯ ರಸ್ತೆಯಲ್ಲಿ ಬೈಕ್ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ವಿಶ್ವನಾಥ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕಲಬುರಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್ಪಿ ಗೋಪಿ ಎ.ಆರ್‌, ಸಿಪಿಐ ಪ್ರಕಾಶ ಯಾತನೂರ, ಪಿಎಸ್‌ಐ ಭೀಮರಾವ್‌ ಬಂಕ್ಲಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.



Join Whatsapp