ಕೇಜ್ರಿವಾಲ್ ನಿವಾಸದ ಹೊರಗೆ ಪಟಾಕಿ ಸಿಡಿಸಿ ಸಂಭ್ರಮ: FIR ದಾಖಲು

Prasthutha|

ಹೊಸದಿಲ್ಲಿ: ಸುಪ್ರೀಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿ ತಿಹಾರ್ ಜೈಲಿನಿಂದ ಹೊರಬಂದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಪಟಾಕಿ ಸಿಡಿಸಿದ್ದಕ್ಕಾಗಿ ದೆಹಲಿ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

- Advertisement -


ಜೈಲಿನಿಂದ ಬಿಡುಗಡೆಯಾದ ನಂತರ ಅವರನ್ನು ಸ್ವಾಗತಿಸಲು ಉತ್ತರ ದೆಹಲಿಯ ಸಿವಿಲ್ ಲೈನ್ಸ್ ನಲ್ಲಿರುವ ನಿವಾಸದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮ ಹೊರ ಹಾಕಿದ್ದರು.


ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 (ಸಾರ್ವಜನಿಕ ಸೇವಕರ ಹೊರಡಿಸಿದ ಆದೇಶಗಳಿಗೆ ಅವಿಧೇಯತೆ) ಅಡಿಯಲ್ಲಿ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಮುಖ್ಯಮಂತ್ರಿ ಅಧಿಕೃತ ನಿವಾಸದ ಹೊರಗೆ ಪಟಾಕಿ ಸಿಡಿಸಿದ ಪ್ರಕರಣವನ್ನು ದಾಖಲಿಸಲಾಗಿದೆ.

- Advertisement -


ಮುಂಬರುವ ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ದೆಹಲಿ ಸರಕಾರ ನಿಷೇಧಿಸಿದೆ.



Join Whatsapp