ಮಂಡ್ಯ: ಜಿಲ್ಲೆಯ ಪಾಂಡವಪುರ ಆರ್‌ಎಸ್‌ಎಸ್ ಕಚೇರಿಗೆ ಪೊಲೀಸರು ದಾಳಿ ಮಾಡಿದ್ದಾರೆ.
ನಾಗಮಂಗಲ ಗಲಭೆಯಲ್ಲಿ ಆರ್ ಎಸ್ ಎಸ್ ಮುಖಂಡರ ಬಂಧನ ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇದೇ ವೇಳೆ RSS ಕಾರ್ಯಾಲಯದ ಒಳ ನುಗ್ಗಿರುವ ಪೊಲೀಸರು ಆರ್ ಎಸ್ ಎಸ್ ಕೆಲ ಮುಖಂಡರನ್ನ ವಶಕ್ಕೆ ಪಡೆದಿದ್ದಾರೆಂದು ಹೇಳಲಾಗುತ್ತಿದೆ.
ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪೊಲೀಸರು ಆರ್‌ಎಸ್‌ಎಸ್ ಕಚೇರಿಗೆ ದಾಳಿ ಮಾಡಿದ್ದಷ್ಟೇ ಅಲ್ಲದೆ, ಶೂ ಹಾಕಿಕೊಂಡೇ ಕಚೇರಿ ಒಳ ಪ್ರವೇಶಿಸಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು, ಡಿವೈಎಸ್‌ಪಿ ಹಾಗೂ ಇನ್ಸ್ಪೆಕ್ಟರ್ ಇಬ್ಬರನ್ನು ಸಸ್ಪೆಂಡ್ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರದ ಆರ್‌ಎಸ್‌ಎಸ್ ಕಾರ್ಯಾಲಯಕ್ಕೆ ರಾತ್ರೋರಾತ್ರಿ ಪೊಲೀಸರು ನುಗ್ಗಿ, ಸಂಘದ ಪ್ರಚಾರಕರ ಮೇಲೆ ದೌರ್ಜನ್ಯ ನಡೆಸಿದ್ದು ಅಕ್ಷಮ್ಯ. ಸಂಘದ ಕಾರ್ಯಾಲಯಕ್ಕೆ ಸಕಾರಣವಿಲ್ಲದೆ ದಾಳಿ ನಡೆಸಿದ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರಾಜಕತೆ ಹೆಚ್ಚಾಗಿದ್ದು, ಹಿಂದೂಗಳನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡುವ ಸನ್ನಿವೇಶ ಸೃಷ್ಟಿಸುತ್ತಿದೆ’’ ಎಂದು ಬಿಜೆಪಿ ಟ್ವೀಟ್ ನಲ್ಲಿ ಉಲ್ಲೇಖಿಸಿದೆ.