ಬೆಂಗಳೂರು: ಶಾಸಕ ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ದೊಡ್ಡ ಮಟ್ಟದಲ್ಲೇ ಸದ್ದು ಮಾಡುತ್ತಿದೆ. ಮುನಿರತ್ನರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದೆಲ್ಲದರ ಮಧ್ಯೆ ಮುನಿರತ್ನ ಅವರ ಕುರಿತ ಇನ್ನೂ ಎರಡು ಆಡಿಯೋ ಇವೆ. ನಾಳೆ ರಿಲೀಸ್ ಮಾಡುತ್ತೇನೆ ಎಂದು ಗುತ್ತಿಗೆದಾರ ಚಲುವರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಗುತ್ತಿಗೆದಾರ ಚಲುವರಾಜು ನಿವಾಸಕ್ಕೆ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಚಲುವರಾಜು, ರಾಜರಾಜೇಶ್ವರಿನಗರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ ಜತೆ ಮಾತಾಡಿದ ಆಡಿಯೋ ಹಾಗೂ 30% ಕಮಿಷನ್ ವಿಚಾರದ ಆಡಿಯೋ ಬಿಡುಗಡೆ ಮಾಡುತ್ತೇನೆ. ನಾಳೆ 2 ಆಡಿಯೋ ರಿಲೀಸ್ ಮಾಡುತ್ತೇನೆ ಎಂದಿದ್ದಾರೆ.