ದರ್ಶನ್ & ಗ್ಯಾಂಗ್’ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ

Prasthutha|

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಿಸಲಾಗಿದೆ.

- Advertisement -


14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.


ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನ ಮಂಗಳವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ಟೆಕ್ನಿಕಲ್ ಸಾಕ್ಷ್ಯಗಳನ್ನು ಸಲ್ಲಿಸಿದರು.

- Advertisement -

ಹಾರ್ಡ್ ಡಿಸ್ಕ್ ನಲ್ಲಿ ಟೆಕ್ನಿಕಲ್ ಎವಿಡೆನ್ಸನ್ನು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದರು. ದರ್ಶನ್ ಗೆ ಬ್ಯಾಕ್ ಪೇನ್ ಇದೆ. ಚೇರ್ ಕೊಡುವಂತೆ ಕೇಳಿದ್ದು, ಚೇರ್ ಕೊಟ್ಟಿಲ್ಲ ಅಂತಾ ದರ್ಶನ್ ಪರ ವಕೀಲರು, ನ್ಯಾಯಾಧೀಶರ ಗಮನಕ್ಕೆ ತಂದರು. ಅಲ್ಲದೇ ಕುಟುಂಬ, ಸ್ನೇಹಿತರ ಭೇಟಿಗೆ ಅವಕಾಶ ಕೊಡುತ್ತಿಲ್ಲ ಎಂದು ಸಹ ದೂರಿದರು. ಭೇಟಿಗೆ ಸಮಯ ಕೊಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದರು.



Join Whatsapp