ಫೆಲೆಸ್ತೀನ್ ಧ್ವಜ ಪ್ರದರ್ಶಿಸಿದ ಆರೋಪ: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Prasthutha|

ಬೆಂಗಳೂರು: ಕೇಂದ್ರ ಸರ್ಕಾರದವರೇ ಫೆಲೆಸ್ತೀನ್ ಗೆ ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಧ್ವಜ ತೋರಿಸುವುದರಲ್ಲಿ ತಪ್ಪೇನಿದೆ ಅಂತ ಬಂಧಿತರು ವಾದ ಮಾಡ್ತಾರೆ ಎಂದು ರಾಜ್ಯ ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

- Advertisement -

ಫೆಲೆಸ್ತೀನ್ ಧ್ವಜ ಪ್ರದರ್ಶಿಸಿದ ಪ್ರಕರಣದ ಕುರಿತು ಮಾತನಾಡಿದ ಅವರು, ಮೂರು ಜಿಲ್ಲೆಗಳಲ್ಲಿ ನಮಗೆ ಫೆಲೆಸ್ತೀನ್ ಧ್ವಜ ಪ್ರದರ್ಶನ ಘಟನೆಗಳು ಕಂಡುಬಂದಿವೆ. ಫೆಲೆಸ್ತೀನ್ ಧ್ವಜ ಪ್ರದರ್ಶನ ಮಾಡಿದವರನ್ನೆಲ್ಲ ಬಂಧನ ಮಾಡಲಾಗಿದೆ. ಆದ್ರೆ ಕೇಂದ್ರ ಸರ್ಕಾರದವರೇ ಫೆಲೆಸ್ತೀನ್ ಗೆ ನಮ್ಮ ಬೆಂಬಲ ಇದೆ ಅಂತ ಹೇಳಿಕೆ ಕೊಟ್ಟಿದ್ದಾರೆ. ಹೀಗಿರುವಾಗ ಧ್ವಜ ತೋರಿಸುವುದರಲ್ಲಿ ತಪ್ಪೇನಿದೆ ಅಂತ ಅವ್ರು ವಾದ ಮಾಡ್ತಾರೆ. ಆದರೂ ಕೂಡ ನಾವು ಅವರನ್ನು ಬಂಧಿಸಿದ್ದೇವೆ ಎಂದು ಹೇಳಿದ್ದಾರೆ.

ಇದೇ ವೇಳೆ ನಾಗಮಂಗಲದಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ವಿಚಾರ ಕುರಿತು ಮಾತನಾಡಿ, ಇದರ ಬಗ್ಗೆ ನಮಗೆ ಮಾಹಿತಿ ಇಲ್ಲ. ಅಧಿಕಾರಿಗಳು ಪರಿಶೀಲನೆ ಮಾಡ್ತಾರೆ. ಬಿಜೆಪಿಯವರು ತಪ್ಪು ಮಾಹಿತಿ ಕೊಟ್ಟಿದ್ದಾರೆ ಎಂದು ನುಡಿದಿದ್ದಾರೆ.



Join Whatsapp