ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್​ ಫೋರ್ಸ್​ ರಚನೆ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಶೇಕಡಾ 50ರಷ್ಟು ಪ್ರಕರಣಗಳು ಬೆಂಗಳೂರು ನಗರದಲ್ಲಿ ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ‌ ಶೇ11 ರಷ್ಟು ಕೇಸ್​​ ಗಳಿವೆ. ಡ್ರಗ್ಸ್​ ಹಾವಳಿ ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ತೀರ್ಮಾನಿಸಿದ್ದೇವೆ. ಗೃಹ ಸಚಿವರು, ಆರೋಗ್ಯ, ವೈದ್ಯಕೀಯ, ನಗರಾಭಿವೃದ್ಧಿ, ಐಟಿಬಿಟಿ ಇಲಾಖೆ ಸಚಿವರುಗಳು‌ ಈ ಟಾಸ್ಕ್​ ಫೋರ್ಸ್​​ ನ ಸದಸ್ಯರಾಗಿರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡ್ರಗ್ಸ್​ ಹಾವಳಿ ತಡೆಗಟ್ಟಲು ಗೃಹ ಸಚಿವರು, ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು, ಐಟಿಬಿಟಿ ಮತ್ತು ನಗರಾಭಿವೃದ್ಧಿ ಇಲಾಖೆ ಸಚಿವರು ಜೊತೆ‌ ಸಭೆ ನಡೆಸಿದೆ. ಸಭೆಯಲ್ಲಿ ಬೆಂಗಳೂರಿನ ಪೊಲೀಸ್ ಆಯುಕ್ತರು, ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು ಎಂದು ತಿಳಿಸಿದರು.

ಡ್ರಗ್ಸ್​ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು ಮಾಡುತ್ತೇವೆ. ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೊಳಗಾದರೆ ಜಾಮೀನು ಸಿಗದಂತೆ ಮಾಡುತ್ತೇವೆ. ಡ್ರಗ್ಸ್​ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ ಆಗಲಿದೆ ಎಂದು ಹೇಳಿದರು.



Join Whatsapp