ಬೈರೂತ್: ಬೈರೂತ್ ಸೇರಿದಂತೆ ಲೆಬನಾನ್ ನ ಹಲವೆಡೆ ಪೇಜರ್, ವಾಕಿ ಟಾಕಿ, ಸೋಲಾರ್ ಉಪಕರಣಗಳ ಸ್ಫೋಟ ಸಂಭವಿಸಿದ್ದು, 32 ಮಂದಿ ಮೃತಪಟ್ಟಿದ್ದು 3,250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಗೊಂಡಿರುವ ಜನರು ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಲೆಬನಾನ್ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ. ಇನ್ನು ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಹಿಜ್ಬುಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರದ ಪೇಜರ್ ಬಾಂಬ್ ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದರು. ಈ ಘಟನೆ ಬಳಿಕ ಹೊಸ ಸ್ಫೋಟಗಳು ಜನರನ್ನು ಮತ್ತಷ್ಟು ಕಂಗಾಲಾಗಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಘಟನೆ ಬಳಿಕ ಹಿಜ್ಬುಲ್ಲಾ ಮತ್ತು ಇಸ್ರೇಲ್ ನಡುವೆ ಯುದ್ಧದ ಭೀತಿಯನ್ನು ಹುಟ್ಟುಹಾಕಿದೆ ಎಂದು ಘಟನಾ ಸ್ಥಳದಲ್ಲಿನ ಪತ್ರಕರ್ತರೊಬ್ಬರು ವರದಿ ಮಾಡಿದ್ದಾರೆ.