ಪ್ರಜ್ವಲ್ ರೇವಣ್ಣ ಜಾಮೀನಿನ ವಾದ-ಪ್ರತಿವಾದ ಮುಕ್ತಾಯ: ಆದೇಶ ಕಾಯ್ದಿರಿಸಿದ ನ್ಯಾಯಾಧೀಶರು

Prasthutha|

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನೀನ ಅರ್ಜಿಯ ವಾದ ಪ್ರತಿವಾದ ಮುಗಿದಿದ್ದು, ಆದೇಶ ಕಾಯ್ದಿರಿಸಲಾಗಿದೆ.

- Advertisement -


ಹೈಕೋರ್ಟ್ ನ ಜನಪ್ರತಿನಿಧಿಗಳ ಪೀಠದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದರು. ಪ್ರಜ್ವಲ್ ಪರ ಹಿರಿಯ ವಕೀಲ ಪ್ರಭುಲಿಂಗ ನಾವಡಗಿ ವಾದ ಮಂಡಿಸಿ, ಇದೊಂದು ರಾಜಕೀಯ ಷಡ್ಯಂತ್ರ್ಯವಾಗಿದ್ದು, 3-4 ವರ್ಷಗಳ ಹಿಂದೆ ಅತ್ಯಾಚಾರವಾಗಿದ್ದ ಬಗ್ಗೆ ಉಲ್ಲೇಖಿಸಿದ್ದಾರೆ.


ಅತ್ಯಾಚಾರ ನಡೆದಿದೆ ಅನ್ನೋದಾದ್ರೆ ಆಗಲೇ ಯಾಕೆ ದೂರು ನೀಡಿರಲಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -


ಪ್ರಜ್ವಲ್ ವಿರುದ್ಧ ದೂರು ದಾಖಲಾಗಿರುವುದು ದುರುದ್ದೇಶಪೂರಕ. ತನಿಖೆಗೆ ಸ್ಪಂದಿಸಿ, ಕಳೆದ 4 ತಿಂಗಳಿಂದ ಜೈಲಲಿದ್ದಾರೆ. ಹೀಗಾಗಿ ಜಾಮೀನು ನೀಡುವಂತೆ ವಾದ ಮಂಡಿಸಿದ್ರು.
ಇದಕ್ಕೆ ಪರತಿವಾದ ಸಲ್ಲಿಸಿದ್ದ ಎಸ್ ಪಿಪಿ ಪ್ರೊ.ರವಿವರ್ಮಕುಮಾರ್, ಆರೋಪಿ ಸಾಕ್ಷಿನಾಶ ಪಡಿಸಿದ್ದು, ಈವರೆಗೂ ತನಿಖೆಗೆ ಮೊಬೈಲ್ ಕೊಟ್ಟಿಲ್ಲ. ಎಫ್ ಐಆರ್ ದಾಖಲಾಗ್ತಿದ್ದಂತೆ ವಿದೇಶಕ್ಕೆ ಹಾರಿ ತಲೆ ಮರೆಸಿಕೊಂಡಿದ್ರು. ಪ್ರಭಾವಿಯಾಗಿದ್ದು ಜಾಮೀನಿನ ಮೇಲೆ ಹೊರ ಬಂದ್ರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರ್ತಾರೆ. ಹೀಗಾಗಿ ಜಾಮೀನು ನೀಡಬಾರದು ಅಂತ ಪ್ರತಿವಾದ ಮಂಡಿಸಿದ್ರು. ವಾದ-ಪ್ರತಿ ವಾದ ಆಲಿಸಿದ ಮಾನ್ಯ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಆದೇಶವನ್ನ ಕಾಯ್ದಿರಿಸಿದ್ದಾರೆ.



Join Whatsapp