ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್​

Prasthutha|

ಬೆಂಗಳೂರು: ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.



Join Whatsapp