ಮಂಡ್ಯ: ಮುಡಾ ಹಗರಣ, ವಾಲ್ಮೀಕಿ ಹಗರಣ ಆಗಿದೆ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಅಭದ್ರತೆ ಕಾಡುತ್ತಿದೆ. ಮುಡಾ ಹಗರಣ, ವಾಲ್ಮೀಕಿ ಹಗರಣ ಆಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪಗಳು ಕೇಳಿಬರ್ತಿವೆ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡಲು ಈ ಸರ್ಕಾರ ವಿಫಲವಾಗಿದೆ. ರಾಜ್ಯದ ಜನರಿಗೆ ಗೊತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ತಮ್ಮ ತಪ್ಪುಗಳನ್ನ ಮುಚ್ಚಿಕೊಳ್ಳಲು, ವಿಷಯ ಡೈವರ್ಟ್ ಮಾಡಲು ವಿಪಕ್ಷ ನಾಯಕರನ್ನ ಟಾರ್ಗೆಟ್ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಸಮಾಜ ವಿರೋಧಿ ಚಟುವಟಿಕೆಗಳಿಗೆ ಬೆಂಬಲ ಕೊಡ್ತಿದ್ದಾರೆ ಎಂದರು.
ಕೆಲವು ತಿಂಗಳಿನಿಂದ ರಾಜ್ಯದಲ್ಲಿ ಒಂದಾದ ಮೇಲೆ ಒಂದು ಘಟನೆ ನಡೆಯುತ್ತಿದೆ. ನಾಗಮಂಗಲ ಕೇಸ್ ಭಯದಿಂದ ಜನರು ಊರು ಬಿಟ್ಟಿದ್ದಾರೆ. ನಿರಪರಾಧಿಗಳ ಮೇಲೆ ಕೇಸ್ ಹಾಕಲಾಗಿದೆ. ಕೃತ್ಯ ಮಾಡಿರೋರ ಮೇಲೆ ಕೇಸ್ ಹಾಕಿಲ್ಲ. ಇದರಲ್ಲಿ ಪೊಲೀಸರ ವೈಫಲ್ಯ ಇದೆ. ಸರ್ಕಾರದ ವೈಫಲ್ಯವೂ ಇದೆ. ಇಂತಹ ಕೇಸ್ ಬಂದಾಗ ದರ್ಶನ್ ಪ್ರಕರಣ ತಂದು ಬಿಡುತ್ತಿದ್ದರು. ಈಗ ಮುನಿರತ್ನ ಹಿಡಿದುಕೊಂಡು ಕೂತಿದ್ದಾರೆ. ಸಿಎಂ ಪರಿಹಾರ ಕೊಡೋದಾಗಿ ಹೇಳಿದ್ದಾರೆ. ಈ ಬಗ್ಗೆಯೂ ವರದಿಯಲ್ಲಿ ಉಲ್ಲೇಖ ಮಾಡಿದ್ದೇವೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.