ಮೈಸೂರು: ವಿಶ್ವದಲ್ಲೇ ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಮಾತ್ರ ಮುಡಾ ಹಣ ಬಳಕೆಯಾಗಿದೆ. ಅದರಲ್ಲಿ ತಪ್ಪೇನಿದೆ? ಜನರ ಒಳತಿಗೆ ಬಳಸುವುದಕ್ಕಾಗಿಯೇ ಆ ಹಣವಿದೆ. ಬಳಕೆ ಮಾಡುವುದರಲ್ಲಿ ಯಾವ ತಪ್ಪುಗಳು ಆಗಿಲ್ಲ ಎಂದರು.
ವಿಪಕ್ಷಗಳು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅಷ್ಟೇ. ವಿಶ್ವದಲ್ಲೇ ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು. ಇಂತಹ ಯೋಜನೆಗಳನ್ನ ಸಹಿಸಕೊಳ್ಳಲು ಆಗದೇ ವಿನಾಕರಣ ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.