ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಮತದಾರರನ್ನು ಸೆಳೆಯಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಈದ್ ಮತ್ತು ಮೊಹರಂ ಸಮಯದಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಭರವಸೆ ನೀಡಿದ್ದಾರೆ.
ಮೆಂಧಾರ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ‘ಈ ಚುನಾವಣೆಯು ಜಮ್ಮು-ಕಾಶ್ಮೀರದಲ್ಲಿ 3 ಕುಟುಂಬಗಳ ಆಡಳಿತವನ್ನು ಕೊನೆಗೊಳಿಸಲಿದೆ. ಅಬ್ದುಲ್ಲಾ ಕುಟುಂಬ, ಮುಫ್ತಿ ಕುಟುಂಬ ಮತ್ತು ನೆಹರು-ಗಾಂಧಿ ಕುಟುಂಬದ ಆಡಳಿತ ಈ ಚುನಾವಣೆಯ ಮೂಲಕ ಕೊನೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ಮೂರು ಕುಟುಂಬಗಳು ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸಿದ್ದವು. ಒಂದುವೇಳೆ 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬರದೇ ಇರುತ್ತಿದ್ದರೆ ಆಗ ಪಂಚಾಯಿತಿ, ಬ್ಲಾಕ್ ಮತ್ತು ಜಿಲ್ಲಾ ಚುನಾವಣೆಗಳು ನಡೆಯುತ್ತಿರಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ