ಕೇಜ್ರಿವಾಲ್ ಅವರನ್ನು ಮತ್ತೆ ದೆಹಲಿ ಸಿಎಂ ಮಾಡುವುದೇ ನಮ್ಮ ಗುರಿ: ಪ್ರಮಾಣ ವಚನದ ಬಳಿಕ ಅತಿಶಿ ಮಾತು

Prasthutha|

- Advertisement -

ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅತಿಶಿ ಇಂದು ಮೊದಲ ಪತ್ರಿಕಾಗೋಷ್ಠಿ ನಡೆಸಿದರು.

ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ದೆಹಲಿ ಸಿಎಂ ಮಾಡುವುದೊಂದೇ ನನ್ನ ಕೆಲಸ ಎಂದು ಹೇಳಿರುವ ಅತಿಶಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ನಡೆಸಿತು, ಅವರನ್ನು 6 ತಿಂಗಳು ಜೈಲಿನಲ್ಲಿ ಇರಿಸಿತು, ಅವರನ್ನು ನಾಶ ಮಾಡಲು ಪ್ರಯತ್ನಿಸಿತು. ಆದರೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿತು. ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ ಎಂದು ಅತಿಶಿ ಆರೋಪಿಸಿದ್ದಾರೆ.

ಇನ್ನುಮುಂದೆ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿರುವುದಿಲ್ಲ ಎಂಬುದು ಬಹಳ ಬೇಸರದ ಸಂಗತಿ. ಆದರೆ, ಮುಂದಿನ ವರ್ಷದ ಚುನಾವಣೆಯವರೆಗೆ ಮಾತ್ರ ನಾನು ಮುಖ್ಯಮಂತ್ರಿಯಾಗಿರುತ್ತೇನೆ. ಮತ್ತೆ ಆಮ್ ಆದ್ಮಿ ಪಕ್ಷ ಚುನಾವಣೆಯಲ್ಲಿ ಗೆದ್ದರೆ ಅರವಿಂದ್ ಕೇಜ್ರಿವಾಲ್ ಅವರೇ ಸಿಎಂ ಆಗುತ್ತಾರೆ. ಈಗ ನಮ್ಮ ಕೆಲಸವೆಂದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಸಿಎಂ ಮಾಡುವುದು” ಎಂದು ಹೊಸ ದೆಹಲಿ ಸಿಎಂ ಅತಿಶಿ ಹೇಳಿದ್ದಾರೆ.



Join Whatsapp