ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ನಾಳೆ (ಎ.7) ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನರ್ ಹೇಳಿಕೆ ನೀಡಿದ್ದು, ಪ್ರತಿಭಟನೆ, ಮುಷ್ಕರ ಮತ್ತು ಗುಂಪಾಗಿ ಸೇರಿದರೆ ಬಂಧಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆಯ ಸಂದೇಶ ನೀಡಿದ್ದಾರೆ.
ನಾಳಿನ ಮುಷ್ಕರದ ಹಿನ್ನೆಲೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕಮಿಷನರ್ ಕಮಲ್ ಪಂಥ್, ಸದ್ಯ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಕೆಲವೊಂದು ಸೂಚನೆಯನ್ನು ಹೊರಡಿಸಲಾಗಿದೆ. ಹಾಗಾಗಿ ಸಿ.ಆರ್.ಪಿ.ಸಿ 144 ರ ಅಡಿ ಆದೇಶವನ್ನು ಹೊರಡಿಸಿದ್ದೇವೆ. ಆ ಆದೇಶದ ಪ್ರಕಾರ ಯಾವುದೇ ರೀತಿಯ ಪ್ರತಿಭಟನೆ ಮತ್ತು ಜನರ ಒಟ್ಟು ಸೇರುವುದನ್ನು ನಿರ್ಬಂಧಿಸಲಾಗಿದೆ. ಒಂದು ವೇಳೆ ಈ ಆದೇಶವನ್ನು ಮೀರಿ ಮುಂದೆ ಬಂದರೆ ಐಪಿಸಿ ಸೆಕ್ಷನ್ ಪ್ರಕಾರ ಅವರನ್ನು ನಾವು ಬಂಧಿಸಿ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಎಲ್ಲಾ ರೀತಿಯ ಬಂದೋಬಸ್ತ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇದನ್ನು ಮೀರಿ ಯಾರಾದರೂ ಮುಂದಾದರೆ ಬಂಧನ ಪಕ್ಕಾ, ಕುಚೇಷ್ಟೆ ಯಾವುದೂ ನಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.