ಕೊಪ್ಪಳ | ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಟ: ಇಬ್ಬರ ಬಂಧನ

Prasthutha|

- Advertisement -

ಕೊಪ್ಪಳ: ಅರೇಬಿಕ್‌ ಅಕ್ಷರಗಳನ್ನು ಹಾಕಿ ರಾಷ್ಟ್ರ ಧ್ವಜ ಹಾರಿಸಿದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕೊಪ್ಪಳ ಪೊಲೀಸರು ಬಂಧಿಸಿದ್ದಾರೆ.

ಯಲಬುರ್ಗಾ ಪಟ್ಟಣದ ಮಹ್ಮದ್ ದಾನೀಶ್ ಕುತುಬುದ್ಧೀನ್ ಖಾಜಿ ಹಾಗೂ ಅವರ ಸಹೋದರ ಮಹ್ಮದ್ ಆದಿನಾನ್ ಖಾಜಿ ಬಂಧಿತ ಯುವಕರು.

- Advertisement -

ಈದ್ ಮಿಲಾದ್ ಆಚರಣೆ ವೇಳೆ ಬಟ್ಟೆಯಿಂದ ತ್ರಿವರ್ಣ ಧ್ವಜ ಹೊಲಿದು ಬಿಳಿಬಣ್ಣದ ಜಾಗದಲ್ಲಿ ಅಶೋಕ ಚಕ್ರದ ಬದಲಿಗೆ ಅರೇಬಿಕ್‌ ಅಕ್ಷರ ಬರೆಯಲಾಗಿತ್ತು.

ಅಲ್ಲದೆ, ಬಿ.ಬಿ.ಫಾತಿಮಾ ದರ್ಗಾದ ಮೇಲೆ ಅರೇಬಿಕ್ ಅಕ್ಷರಗಳುಳ್ಳ ತ್ರಿವರ್ಣ ಧ್ವಜ ಹಾರಾಡುತ್ತಿದೆ ಎಂದು ಸಂಘಪರಿವಾರದ ಕಾರ್ಯಕರ್ತರು ಶನಿವಾರ ಯಲಬುರ್ಗಾ ಪೊಲೀಸರಿಗೆ ದೂರು ನೀಡಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ದರ್ಗಾದ ಅಧಿಕಾರಿಗಳನ್ನು ಧ್ವಜ ತೆಗೆಯುವಂತೆ ಸೂಚಿಸಿದರು.



Join Whatsapp