ಮುಡಾ ಪ್ರಕರಣ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಭವಿಷ್ಯ ನಾಳೆ ನಿರ್ಧಾರ

Prasthutha|

- Advertisement -

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತವಾಗಿದ್ದು, ನಾಳೆ(ಸೆಪ್ಟೆಂಬರ್ 24) ಹೈಕೋರ್ಟ್​ ತೀರ್ಪು ಪ್ರಕಟಿಸಲಿದೆ.

ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ (ಮಂಗಳವಾರ) ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ.

- Advertisement -

ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದ್ದು, ಎಲ್ಲರ ಚಿತ್ತ ಹೈಕೋರ್ಟ್​​ನತ್ತ ನೆಟ್ಟಿದೆ.



Join Whatsapp