ತೀರ್ಪಿಗೆ ತಲೆಬಾಗಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಬಿಜೆಪಿ

Prasthutha|

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.

- Advertisement -

ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.

ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್ ಅಶೋಕ್​ ಮಾತನಾಡಿ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಆಗ್ರಹಿಸಿದರು.

- Advertisement -

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶವನ್ನು ಸಿಎಂ ಸಿದ್ದರಾಮಯ್ಯ ಪಾಲಿಸಬೇಕು. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು

ವಿಪಕ್ಷ ನಾಯಕ ಆರ್​ ಅಶೋಕ್​ ಮಾತನಾಡಿ, ಸತ್ಯಕ್ಕೆ ಜಯವಾಗಿದೆ. ಹೈಕೋರ್ಟ್​ ತೀರ್ಪು ಸ್ವಾಗತಾರ್ಹ ಸಿದ್ದರಾಮಯ್ಯ ಅವರು ಕೂಡಲೆ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಅವರು ರಾಜಿನಾಮೆ ನೀಡುವವರೆಗು ನಾವು ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದರು



Join Whatsapp