ಕೋವಿಡ್ ಸೂಪರ್ ಸ್ಪ್ರೆಡರ್ ತಾಣವಾಗಲಿದೆಯೇ ಕುಂಭಮೇಳ?

Prasthutha|

ಹೊಸದಿಲ್ಲಿ : ದೇಶದಲ್ಲಿ ಕೋವಿಡ್ ಹರಡುವಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಸರ್ಕಾರ ಕೋವಿಡ್ ನಿಯಂತ್ರಿಸುವಲ್ಲಿ ವಿಫಲಗೊಂಡಿದೆ. ಈ ನಡುವೆ ಸೋಂಕಿನ ಹರಡುವಿಕೆಗೆ ಕುಂಭ ಮೇಳವು ಕಾರಣವಾಗುವ ಸಾಧ್ಯತೆ ಇದೆ ಎಂದು ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ಆತಂಕ ವ್ಯಕ್ತಪಡಿಸಿದೆ.

- Advertisement -

ಉತ್ತರಾಖಂಡದ ಹರಿದ್ವಾರದಲ್ಲಿ ಏಪ್ರಿಲ್​ 1ರಿಂದ ಕುಂಭ ಮೇಳ ನಡೆಯುತ್ತಿದ್ದು, ಇದು ಕೋವಿಡ್ ಸೋಂಕು ಮತ್ತಷ್ಟು ಹರಡುವಿಕೆಯ ವೇಗವನ್ನು ಪಡೆಯಲು ಕಾರಣವಾಗಬಹುದು ಎಂದು ಅಧಿಕಾರಿಗಳು, ಕಾರ್ಯದರ್ಶಿ ಮಟ್ಟದ ಉನ್ನತ ಸಭೆಯಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.

ಕುಂಭ ಮೇಳವು ಕೋವಿಡ್ ನ ಸೂಪರ್​ ಸ್ಪ್ರೆಡರ್​ ಆಗುವ ಸಾಧ್ಯತೆ ಇದೆ ಎಂದು ಕೆಲವು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ನಿಗದಿಗೂ ಮೊದಲೇ ಕಾರ್ಯಕ್ರಮವನ್ನು ಮುಗಿಸುವುದು ಒಳಿತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

- Advertisement -

ಕುಂಭ ಮೇಳಕ್ಕೆ ಭೇಟಿ ನೀಡುವ ಸಾಧುಗಳು, ಭಕ್ತರು ಮಾಸ್ಕ್​ ಧರಿಸುವ ಬಗ್ಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳುವುದು ಅವಶ್ಯವಾಗಿದೆ, ಈ ಕುಂಭಮೇಳವನ್ನು ಸಮಯಕ್ಕೂ ಮೊದಲೇ ಮುಕ್ತಾಯಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ರೀತಿಯ ಯೋಜನೆ ರೂಪಿಸಿಲ್ಲ ಎನ್ನಲಾಗಿದೆ.

ಏಪ್ರಿಲ್​ 1 ರಿಂದ ಆರಂಭವಾಗಿರುವ ಈ ಕುಂಭಮೇಳ ಏಪ್ರಿಲ್​ 30ರವರೆಗೆ ನಡೆಯಲಿದೆ.



Join Whatsapp