ಬೆಂಗಳೂರು: ಮುಡಾ ಪ್ರಕರಣ ಸಂಬಂಧ ನಾನು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹಿಸಿಲ್ಲ. ಸಿಎಂ ಸಿದ್ದರಾಮಯ್ಯ ರಾಜೀನಾಮೆಗೂ ಒತ್ತಾಯಿಸಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ರಾಜ್ಯಪಾಲರು ಪ್ರಾಸಿಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿದೆ.
ಇನ್ನು ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಮುಡಾ ಸಂಬಂಧ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದು ನಿಜ. ಹಾಗೆಂದು ಯಾರ ರಾಜೀನಾಮೆಗೂ ನಾನು ಆಗ್ರಹಿಸಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಕೇಳುವುದು ಇಲ್ಲ ಎಂದರು.