ಕರ್ನಾಟಕದಲ್ಲಿರೋದು ದರೋಡೆಕೋರರ ಸರ್ಕಾರ; ಚಪ್ಪಲಿ ಹಾರ ಸಿದ್ದರಾಮಯ್ಯಗೆ ಹಾಕ್ಬೇಕಾ?: ಹೆಚ್‌ಡಿಕೆ ಕೆಂಡ

Prasthutha|

ನವದೆಹಲಿ: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಾಗ ಪ್ರತಿಭಟನೆ ಮಾಡಿದ್ರಿ, ಪ್ರತಿಕೃತಿಗೆ ಚಪ್ಪಲಿ ಹಾರಹಾಕಿ ದಹನ ಮಾಡಿದ್ರಿ. ಈಗ ಹೈಕೋರ್ಟ್‌ ಆದೇಶ ಆಗಿದೆಯಲ್ಲ, ಈಗ ಚಪ್ಪಲಿ ಹಾರ ಯಾರಿಗೆ ಹಾಕಬೇಕು? ಸಿದ್ದರಾಮಯ್ಯ ಅವರಿಗೆ ಹಾಕಬೇಕಾ? ಇನ್ಯಾರಿಗೆ ಹಾಕ್ತಿರಿ? ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

- Advertisement -

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್‌ಡಿಕೆ, ಸಿದ್ದರಾಮಯ್ಯ ಅವರಿಗೆ ವಕೀಲರಾಗಿರುವ ಅನುಭವ ಇದೆ. ನೈತಿಕತೆ ಉಳಿಸಿಕೊಂಡು ಬಂದವರಲ್ಲವೇ? ಲೋಕಾಯಕ್ತ ತನಿಖೆಗೆ ಆದೇಶ ಮಾಡಿದಾಗ ಅಧಿಕಾರದಲ್ಲಿ ಉಳಿಬೇಕಾ ಅಂತ ಅವರೇ ಹೇಳಬೇಕು. ಹೈಕೋರ್ಟ್ ಆದೇಶ ನೀಡಿದೆಯಲ್ಲ, ಈಗ ಚಪ್ಪಲಿ ಹಾರ ಯಾರಿಗೆ ಹಾಕಬೇಕು? ಸಿದ್ದರಾಮಯ್ಯ ಅವರಿಗೆ ಹಾಕಬೇಕಾ? ಇನ್ಯಾರಿಗೆ ಹಾಕ್ತಿರಿ? ಎಂದು ಲೇವಡಿ ಮಾಡಿದ್ದಾರೆ.

ಆದೇಶದ ಪ್ರತಿ ಎಲ್ಲರಿಗೂ ಸಿಕ್ಕಿದೆ. ಆದರೆ ಸಿಎಂಗೆ ಮಾತ್ರ ತೀರ್ಪಿನ ಪ್ರತಿ ಸಿಕ್ಕಿಲ್ಲ, ಓದಿಲ್ಲ ಅಂತಿದ್ದಾರೆ. ಅಲ್ಲದೇ ಕುಮಾರಸ್ವಾಮಿ ರಾಜೀನಾಮೆಯನ್ನೂ ಸಿಎಂ ಕೇಳಿದ್ದಾರೆ. ಅವರೂ ಜಾಮೀನಿನ ಮೇಲೆ ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.



Join Whatsapp