ರಾಜ್ಯದ 14 ಜಿಲ್ಲಾಸ್ಪತ್ರೆಗಳಲ್ಲಿ CT, MRI ಸ್ಕ್ಯಾನಿಂಗ್‌ ಸೇವೆಗೆ ಅನುದಾನದ ಕೊರತೆಯಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

Prasthutha|

ಬೆಂಗಳೂರು: ರಾಜ್ಯದಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳು ಸ್ಥಗಿತಗೊಂಡಿವೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

- Advertisement -

ಈ ಕುರಿತು ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ತಕ್ಷಣ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಇಲಾಖೆ ಮಾಧ್ಯಮಗಳಲ್ಲಿ ಬಂದಿರುವ ವರದಿ ನಿರಾಧಾರ ಎಂದಿದೆ.

ರಾಜ್ಯದಲ್ಲಿ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳಿಗೆ ಅನುದಾನದ ಕೊರತೆಯಿದೆ ಎಂಬ ಮಾಧ್ಯಮ ವರದಿಗಳು ಆಧಾರ ರಹಿತವಾಗಿದೆ. ಸಿಟಿ ಮತ್ತು ಎಂಆರ್‌ಐ ಸ್ಕ್ಯಾನಿಂಗ್‌ ಸೇವೆಗಳಿಗೆ ಅಗತ್ಯವಿರುವ 63.49 ಕೋಟಿ ರೂ. ಅನುದಾನ ಆರೋಗ್ಯ ಇಲಾಖೆಯ ಬಳಿ ಲಭ್ಯವಿದ್ದು, ಯಾವುದೇ ರೀತಿಯ ಅನುದಾನದ ಕೊರತೆಯಾಗಿಲ್ಲ ಎಂದು ಇಲಾಖೆ ಸ್ಪಷ್ಟನೆ ನೀಡಿದೆ.



Join Whatsapp