CBIಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್ ನಿರ್ಧಾರ

Prasthutha|

ಬೆಂಗಳೂರು: ಸಿಬಿಐ ತನಿಖಾ ದಳಕ್ಕೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

- Advertisement -


ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಭ್ರಷ್ಟಾಚಾರ ತಡೆ ಕಾಯ್ದೆಯಡಿ ಮುಕ್ತವಾಗಿ ಸಿಬಿಐ ತನಿಖೆ ನಡೆಸಬಹುದಿತ್ತು. ಈ ಹಿಂದೆ ಮುಕ್ತ ತನಿಖೆ ನಡೆಸಲು ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು ಎಂದಿದ್ದಾರೆ.


ರಾಜ್ಯದಲ್ಲಿ ಡೆಲ್ಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್ ಮೆಂಟ್ ಆ್ಯಕ್ಟ್ 1946 ಅಡಿ ಅಪರಾಧ ಪ್ರಕರಣ ತನಿಖೆ ಮಾಡಲು ಮುಕ್ತ ಅವಕಾಶ ಇತ್ತು. ಈಗ ಸಿಬಿಐ ಮುಕ್ತ ತನಿಖೆಗೆ ಇದ್ದ ಅಧಿಸೂಚನೆ ಹಿಂಪಡೆಯಲು ನಿರ್ಧಾರ ಮಾಡಲಾಗಿದೆ. ಸಿಬಿಐ ದುರ್ಬಳಕೆ ಆಗಬಹುದು ಎಂಬ ಚರ್ಚೆಯಾಗಿದೆ ಎಂದು ತಿಳಿಸಿದ್ದಾರೆ.



Join Whatsapp