ಎಸ್‍ಸಿ/ಎಸ್‍ಟಿ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ

Prasthutha|

- Advertisement -

ಮಂಗಳೂರು: ಪರಿಶಿಷ್ಟ ಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು – ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು gov.i ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

- Advertisement -

ಅರ್ಹತೆಗಳು:
ಮಾನ್ಯತೆ ಪಡೆದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪೋಷಕರ ಕುಟುಂಬದ ಆದಾಯ ಮಿತಿ ವಾರ್ಷಿಕ ರೂ.2.50 ಲಕ್ಷ ಒಳಗಿರಬೇಕು. ವಿದ್ಯಾರ್ಥಿ ಮುಂದಿನ ತರಗತಿಗೆ ಪ್ರವೇಶ ಪಡೆಯಲು ಅರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ದಾಖಲೆಗಳು:
ಹೊಸ ವಿದ್ಯಾರ್ಥಿಗಳು ಖಾತೆಯನ್ನು ಸೃಜಿಸಿ ಅರ್ಜಿ ಸಲ್ಲಿಸಬೇಕು ಹಾಗೂ ನವೀಕರಣ ವಿದ್ಯಾರ್ಥಿಗಳು ವಿದ್ಯಾರ್ಥಿ ಲಾಗಿನ್‍ನಲ್ಲಿ ಹಳೆಯ ನೋಂದಣಿ ಸಂಖ್ಯೆ ಹಾಗೂ ಪಾಸ್‍ವರ್ಡ್ ಬಳಸಿಕೊಂಡು ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಥಿಗಳ/ ಪೋಷಕರ ಆಧಾರ್ ಸಂಖ್ಯೆ ಮತ್ತು ಆಧಾರ್‍ನಲ್ಲಿರುವಂತೆ ಹೆಸರು, ಮೊಬೈಲ್ ಸಂಖ್ಯೆ, ಇ-ಮೇಲ್ ಐಡಿ, ಎಸ್‍ಎಸ್‍ಎಲ್‍ಸಿ ನೋಂದಣಿ ಸಂಖ್ಯೆ, ಹೆಸರಿನಲ್ಲಿರುವ ಜಾತಿ/ಆದಾಯ ಪ್ರಮಾಣದ ಪತ್ರದ ಆರ್‍ಡಿ ಸಂಖ್ಯೆ, ವಿದ್ಯಾರ್ಥಿಯು ವಿಕಲ ಚೇತನರಾಗಿದ್ದಲ್ಲಿ (ಯು.ಡಿ.ಐ.ಡಿ ಗುರುತಿನ ಚೀಟಿ), ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೊಂದಣಿ ಸಂಖ್ಯೆ, ಸಂಬಂಧಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ(ಅನ್ವಯವಾದಲ್ಲಿ) ಹಾಗೂ ಹಾಸ್ಟೆಲ್ ವಿವರಗಳು(ಅನ್ವಯವಾದಲ್ಲಿ) ವಿದ್ಯಾರ್ಥಿಯು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ಕುಟುಂಬ ತಂತ್ರಾಂಶದಲ್ಲಿ ನೋಂದಾಣಿಯಾಗಿ ಕುಟುಂಬ ಗುರುತಿನ ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಸ್‍ಸಿ/ಎಸ್‍ಟಿ ಪ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನ: ಅರ್ಜಿ ಆಹ್ವಾನ
ಮಂಗಳೂರು: ಪರಿಶಿಷ್ಟಜಾತಿ/ಪಂಗಡದ ಕಲ್ಯಾಣ ಇಲಾಖೆಯಿಂದ ಪ.ಜಾತಿ/ಪ.ವರ್ಗದ ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು gov.i ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹತೆಗಳು :
ಮಾನ್ಯತೆ ಪಡೆದ ಮೆಟ್ರಿಕ್ ಪೂರ್ವ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಪೋಷಕರ ಕುಟುಂಬದ ಆದಾಯ ಮಿತಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.6 ಲಕ್ಷ ಹಾಗೂ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ವರಮಾನ ರೂ.2.50 ಲಕ್ಷ ಇರಬೇಕು.

ಅರ್ಜಿ ಸಲ್ಲಿಸುವ ವಿಧಾನ ಹಾಗೂ ದಾಖಲೆಗಳು
ಹೊಸ ವಿದ್ಯಾರ್ಥಿಗಳು ಖಾತೆಯನ್ನು ಸೃಜಿಸಿ ಅರ್ಜಿ ಸಲ್ಲಿಸಬೇಕು, ವಿದ್ಯಾರ್ಥಿಗಳ ಆರ್‍ಡಿ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾಥಿಗಳ ಆಧಾರ್ ಕಾರ್ಡ್ ಪ್ರತಿ, ಪೋಷಕರ ಆಧಾರ್ ಕಾರ್ಡ್ ಪ್ರತಿ, ಪಡಿತರ ಚೀಟಿ ಪ್ರತಿ, ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ಪ್ರತಿ(ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಲಿಂಕ್ ಮಾಡಿ ಓPಅIಗೆ ಮ್ಯಾಪಿಂಗ್ ಮಾಡಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp